HomeKarnatakaಶುಭ ಸುದ್ದಿ: 10 ದಿನದೊಳಗೆ 4.42 ಕೋಟಿ ಬಿಪಿಎಲ್, 1.28 ಕೋಟಿ ಅಂತ್ಯೋದಯ ಕುಟುಂಬಗಳ ಖಾತೆಗೆ...

ಶುಭ ಸುದ್ದಿ: 10 ದಿನದೊಳಗೆ 4.42 ಕೋಟಿ ಬಿಪಿಎಲ್, 1.28 ಕೋಟಿ ಅಂತ್ಯೋದಯ ಕುಟುಂಬಗಳ ಖಾತೆಗೆ 5 ಕೆಜಿ ಅಕ್ಕಿ ಹಣ ಜಮಾ

ಬೆಂಗಳೂರು: ಅನ್ನಭಾಗ್ಯ ಯೋಜನೆಯ 5 ಕೆಜಿ ಹೆಚ್ಚುವರಿ ಬದಲಿಗೆ ನಗದು ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದ್ದಾರೆ.

ಸಾಂಕೇತಿಕವಾಗಿ ಮೈಸೂರು ಮತ್ತು ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಹಣ ಸಂದಾಯ ಮಾಡಲಾಗಿದ್ದು, ಇಂದಿನಿಂದ ಪ್ರತಿದಿನ 4 ಜಿಲ್ಲೆಗಳಿಗೆ ಮುಂದಿನ 10 ದಿನಗಳ ಒಳಗೆ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ ತಿಂಗಳ ಪಡಿತರ ಹಣವನ್ನು ಈ ತಿಂಗಳ ಅಂತ್ಯದೊಳಗೆ ಹಂತ ಹಂತವಾಗಿ ವಿತರಿಸಲಾಗುತ್ತದೆ. 1.28 ಕೋಟಿ ಅಂತ್ಯೋದಯ, 4.42 ಕೋಟಿ ಬಿಪಿಎಲ್ ಕುಟುಂಬಗಳಿಗೆ ಹಣ ನೀಡಲಾಗುವುದು. ಎಲ್ಲರಿಗೂ 10 ಕೆಜಿ ಅಕ್ಕಿ ನೀಡಲು ಅಕ್ಕಿ ಸಿಗದ ಕಾರಣ 5 ಕೆಜಿ ಹೆಚ್ಚುವರಿ ಆಹಾರಧಾನ್ಯದ ಹಣವನ್ನು ಖಾತೆಗೆ ಜಮಾ ಮಾಡಲಾಗುವುದು. ತಲಾ 170 ರೂಪಾಯಿಯಂತೆ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular