ಬೆಂಗಳೂರು : ರಾಜ್ಯದಲ್ಲಿ ಆನ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆನ್ ಲೈನ್ ವಂಚನೆ ತಡೆಯಲು ರಾಜ್ಯ ಸರ್ಕಾರವು ಇದೀಗ ಮಹತ್ವದ ಕ್ರಮ ಕೈಗೊಂಡಿದೆ.
ಆನ್ ಲೈನ್ ಮೂಲಕ ಸಾಲ ನೀಡಿ ಸಾರ್ವಜನಿಕರಿಗೆ ವಂಚಿಸುವ ಆ್ಯಪ್ ಗಳ ಮೇಲೆ ನಿಗಾವಹಿಸಲು ಜಿಲ್ಲಾಮಟ್ಟದಲ್ಲಿ ಸಿಐಎನ್ ಪೊಲೀಸ್ ಠಾಣೆಗಳನ್ನು ತೆರೆದು, ಪೊಲೀಸ್ ಇನ್ಸ್ ಪೆಕ್ಟರ್ ದರ್ಜೆ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ವಿಧಾನಪರಿಷತ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್. ರಾಜ್ಯದಲ್ಲಿ ಆನ್ ಲೈನ್ ವಂಚನೆ ತಡೆಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಆನ್ ಲೈನ್ ಮೂಲಕ ಸಾಲ ನೀಡಿ ಸಾರ್ವಜನಿಕರಿಗೆ ಮಾನಸಿಕ ಕಿರುಕುಳ ನೀಡುತ್ತಿರುವ 42 ಆ್ಯಪ್ ಗಳನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ತೆಗೆದುಹಾಕಲಾಗಿದೆ ಎಂದರು.