HomeKarnatakaBIG NEWS: ದುಬೈಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ವಿಳಂಬ; ಮಂಗಳೂರು ಏರ್ ಪೋರ್ಟ್ ನಲ್ಲಿ...

BIG NEWS: ದುಬೈಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ವಿಳಂಬ; ಮಂಗಳೂರು ಏರ್ ಪೋರ್ಟ್ ನಲ್ಲಿ ಪ್ರಯಾಣಿಕರ ಆಕ್ರೋಶ

ಮಂಗಳೂರು: ಮಂಗಳೂರಿನಿಂದ ದುಬೈಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ವಿಳಂಬವಾಗಿದ್ದು, ನಿನ್ನೆ ರಾತ್ರಿಯಿಂದ ವಿಮಾನಕ್ಕಾಗಿ ಕಾಯುತ್ತಿರುವ ಪ್ರಯಾಣಿಕರು ಏರ್ ಪೋರ್ಟ್ ನಲ್ಲೇ ಪರದಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ವಿಮಾನ ನಿಲ್ದಾಣದಿಂದ ನಿನ್ನೆ ರಾತ್ರಿ 11 ಗಂಟೆಗೆ ಏರ್ ಇಂಡಿಯಾ ವಿಮಾನ ದುಬೈಗೆ ತೆರಳಬೇಕಿತ್ತು. ಆದರೆ ವಿಮಾನದ ಎಂಜಿನ್ ನಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ವಿಮಾನ ವಿಳಂಬವಾಗಿದೆ. ರಾತ್ರಿಯೆಲ್ಲ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿಯೇ ತಂಗಿದ್ದು, ಈವರೆಗೂ ಬದಲಿ ವಿಮಾನ ವ್ಯವಸ್ಥೆಯನ್ನೂ ಮಾಡದ ಏರ್ ಪೋರ್ಟ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಯಾಣಿಕರು ಹಾಗೂ ಏರ್ ಪೋರ್ಟ್ ಅಧಿಕರಿಗಳ ನಡುವೆ ಮಾತಿನಚಕಮಕಿ ನಡೆದಿದೆ. ರಾತ್ರಿಯಿಂದ ವಿಮಾನಕ್ಕಾಗಿ ಕಾಯುತ್ತಿದ್ದರೂ ಅಧಿಕಾರಿಗಳು ಯಾವುದೇ ಬದಲಿ ವ್ಯವಸ್ಥೆ ಮಾಡಿಲ್ಲ, ಸೂಕ್ತ ಮಾಹಿತಿಯನ್ನೂ ನೀಡುತ್ತಿಲ್ಲ ಎಂದು ಪ್ರಯಾಣಿಕರು ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular