ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ ಕೊಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿಕೊಂಡಿದ್ದೆ. ನನ್ನ ಮನವಿಯನ್ನು ಅನುಮೋದಿಸಿದ ಸಿದ್ದರಾಮಯ್ಯ ಅವರು, ವಾರದಲ್ಲಿ 2 ದಿನ ಮಕ್ಕಳಿಗೆ ಮೊಟ್ಟೆ ನೀಡಲು ಅನುಮೋದನೆ ನೀಡಿದ್ದಾರೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ.
ನಾನು ಅಧಿಕಾರಕ್ಕೆ ಬಂದಾಗ ನನ್ನ ಕ್ಷೇತ್ರದಲ್ಲಿ ಶಿಕ್ಷಕರು ಇರಲಿಲ್ಲ. ಸೊರಬ ಕ್ಷೇತ್ರದಲ್ಲಿ 52 ಶಾಲೆಗಳಲ್ಲಿ ಶಿಕ್ಷಕರೇ ಇರಲಿಲ್ಲ.ಎಷ್ಟೋ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಿದ್ದಾರೆ. ಮುಂದಿನ 8 ತಿಂಗಳಲ್ಲಿ ಕೆಲವೊಂದು ಪ್ಲಾನ್ ಮಾಡಿಕೊಂಡಿದ್ದೇನೆ.ವ್ಯವಸ್ಥೆ ಯಾವ ತರಹ ನಡೆಯುತ್ತೆ ಅಂತ ತಿಳಿದುಕೊಳ್ಳಬೇಕು ಎಂದರು.