HomeCrimeBIG NEWS: ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ; ಮತ್ತೆ ನಾಲ್ವರು ಆರೋಪಿಗಳು ಅರೆಸ್ಟ್

BIG NEWS: ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ; ಮತ್ತೆ ನಾಲ್ವರು ಆರೋಪಿಗಳು ಅರೆಸ್ಟ್

ಮೈಸೂರು: ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ಟಿ. ನರಸಿಪುರ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣ ಸಂಬಂಧ ನಿನ್ನೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಎ1 ಆರೋಪಿ ಮಣಿಕಂಠ ಹಾಗೂ ಎ2 ಆರೋಪಿ ಸಂದೇಶ್ ನನ್ನು ಬಂಧಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರನ್ನು ಅನಿಲ್, ಶಂಕರ್ @ ತುಪ್ಪ, ಮಂಜು ಹಾಗೂ ಹ್ಯಾರಿಸ್ ಎಂದು ಗುರುತಿಸಲಾಗಿದೆ. ಈ ಮೂಲಕ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಕೇಸ್ ನಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಆರೋಪಿಗಳ ಪತ್ತೆಗಾಗಿ ಮೈಸೂರು ಎಸ್ ಪಿ ಸೀಮಾ ಲಾಟ್ಕರ್ 2 ತಂಡಗಳನ್ನು ರಚಿಸಿದ್ದರು. ಇನ್ನು ಪ್ರಕರಣ ಸಂಬಂಧ ಇನ್ನಷ್ಟು ಆರೋಪಿಗಳನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular