ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಮತ್ತೆ ವರ್ಗಾವಣೆ ದಂಧೆ ವಿಚಾರ ಪ್ರತಿಧ್ವನಿಸಿದ್ದು, ಆಡಳಿತ ಹಾಗೂ ವಿಪಕ್ಷ ಬಿಜೆಪಿ ಸದಸ್ಯರ ನಡುವೆ ಗದ್ದಲ-ಕೋಲಾಹಲ ನಡೆದಿದೆ.
ವಿಧಾನಸಭೆಯಲ್ಲಿ ಶಾಸಕ ಯತ್ನಾಳ್, ವಿಜಯಪುರ ಮಹಾನಗರ ಪಾಲಿಕೆ ಅಧಿಕಾರಿಗಳ ವರ್ಗಾವಣೆ ವಿಚಾರ ಪ್ರಸ್ತಾಪಿಸಿದರು. ಐಎಎಸ್, ಕೆಎಎಸ್ ಅಧಿಕಾರಿಗಳ ಬದಲಾಗಿ ನಾನ್ ಕೆಎಎಸ್ ಅಧಿಕಾರಿಗಳನ್ನು ಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗಿರಲಿಲ್ಲ ಎಂದು ಆರೋಪಿಸಿದರು.
ಯತ್ನಾಳ್ ಆರೋಪಕ್ಕೆ ಕಿಡಿ ಕಾರಿದ ಸಿಎಂ ಸಿದ್ದರಾಮಯ್ಯ, ನಾವು ಅಧಿಕಾರಿಗಳ ವರ್ಗಾವಣೆ ದಂಧೆ ನಡೆಸಲಿಲ್ಲ. ನೀವು ಸತ್ಯ ಹರಿಶ್ಚಂದ್ರರಾ? ಎಂದು ಪ್ರಶ್ನಿಸಿದರು.ಈ ವೇಳೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಯತ್ನಾಳ್ ಹೇಳಿಕೆಯಲ್ಲಿ ತಪ್ಪೇನಿದೆ? ಉತ್ತರ ಕೊಡಿ ಎಂದು ಹೇಳಿದರು. ಸದನದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಗದ್ದಲ-ಗಲಾಟೆ ಹೆಚ್ಚಾಗುತ್ತಿದ್ದಂತೆ ಸ್ಪೀಕರ್ ಖಾದರ್ ವಿಧಾನಸಭೆ ಕಲಾಪ ಕೆಲ ಕಾಲ ಮುಂದುಡಿದರು.