HomeKarnatakaBIG NEWS: ಜೈನಮುನಿ ಹತ್ಯೆ ಕೇಸ್; ಆರೋಪಿಗಳು 7 ದಿನ ಪೊಲೀಸ್ ಕಸ್ಟಡಿಗೆ

BIG NEWS: ಜೈನಮುನಿ ಹತ್ಯೆ ಕೇಸ್; ಆರೋಪಿಗಳು 7 ದಿನ ಪೊಲೀಸ್ ಕಸ್ಟಡಿಗೆ

ಬೆಳಗಾವಿ: ಜೈನಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಚಿಕ್ಕೋಡಿ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ನೀಡಿದೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನಂದಿಪರ್ವತ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾರಾಯಣ ಮಾಳಿ ಹಾಗೂ ಹಸನ್ ಸಾಬ್ ಬಂಧಿತ ಆರೋಪಿಗಳಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಇಂದು ಚಿಕ್ಕೋಡಿ 7ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ಆರೋಪಿಗಳ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದರು.

ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಇಬ್ಬರು ಆರೋಪಿಗಳನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular