ಮೈಸೂರು : ಆರೋಪಿಗಳು 3 ತಿಂಗಳಲ್ಲಿ ಜೈಲಿನಿಂದ ಹೊರಗೆ ಬಂದ್ರೆ ಕತ್ತು ಕುಯ್ದುಕೊಂಡು ಸಾಯ್ತೀನಿ ಎಂದು ಮೃತ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಪತ್ನಿ ಎಚ್ಚರಿಕೆ ನೀಡಿದ್ದಾರೆ.
ಮೃತ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಿವಾಸಕ್ಕೆ ಇಂದು ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಭೇಟಿ ಮಾಡಿ ವೇಣುಗೋಪಾಲ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ವೇಳೆ ಅವರ ಮುಂದೆ ಅಳಲು ತೋಡಿಕೊಂಡ ಮೃತ ವೇಣುಗೋಪಾಲ್ ಪತ್ನಿ, ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕು. ಮೂರೇ ತಿಂಗಳಿಗೆ ಆರೋಪಿಗಳು ಹೊರಗೆ ಬಂದ್ರೆ ನಾನು ಮತ್ತು ಮಗಳು ಕತ್ತು ಕೊಯ್ದುಕೊಂಡು ಸಾಯುತ್ತೇವೆ. ಈಗ ನನಗೆ ಯಾರು ಗತಿ ಎಂದು ಅಳಲು ತೋಡಿಕೊಂಡಿದ್ದಾಳೆ. ಇದೇ ವೇಳೆ ವೈಯಕ್ತಿಕವಾಗಿ ಧನ ಸಹಾಯ ಮಾಡಿದ ಸುನೀಲ್ ಬೋಸ್ ‘ ಜಿಲ್ಲಾಧಿಕಾರಿಗಳು ನನಗೆ ಎಲ್ಲಾ ಹೇಳಿದ್ದಾರೆ. ನನ್ನ ತಂದೆಯವರುಗೆ ಹೇಳಿ ಗರಿಷ್ಠ ಪರಿಹಾರ ಸಿಗುವಂತೆ ಮಾಡುತ್ತೇನೆ ಎಂದು ವೇಣುಗೋಪಾಲ್ ಪತ್ನಿಗೆ ಸುನೀಲ್ ಬೋಸ್ ಭರವಸೆ ನೀಡಿದರು.
ಯುವ ಬ್ರಿಗೇಡ್ ಕಾರ್ಯಕರ್ತನ ಪತ್ನಿಗೆ 25 ಲಕ್ಷ ಪರಿಹಾರ ಕೊಡಬೇಕು
ಹತ್ಯೆಯಾದ ‘ಯುವ ಬ್ರಿಗೇಡ್’ ಕಾರ್ಯಕರ್ತನ ಪತ್ನಿಗೆ 25 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ ಕೊಡಬೇಕು ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಆಗ್ರಹಿಸಿದ್ದಾರೆ.
ಟಿ. ನರಸೀಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಅಶ್ವಥ್ ನಾರಾಯಣ್ ಹತ್ಯೆಯಾದ ‘ಯುವ ಬ್ರಿಗೇಡ್’ ಕಾರ್ಯಕರ್ತ ವೇಣುಗೋಪಾಲ್ ಪತ್ನಿಗೆ 25 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ ಕೊಡಬೇಕು . ವೇಣುಗೋಪಾಲ್ ಸಾವಿಗೆ ಸರ್ಕಾರವೇ ನೇರಹೊಣೆ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ವಾಗ್ಧಾಳಿ ನಡೆಸಿದ್ದಾರೆ.
ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ಟಿ. ನರಸಿಪುರ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣ ಸಂಬಂಧ ನಿನ್ನೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಎ1 ಆರೋಪಿ ಮಣಿಕಂಠ ಹಾಗೂ ಎ2 ಆರೋಪಿ ಸಂದೇಶ್ ನನ್ನು ಬಂಧಿಸಲಾಗಿತ್ತು.ಇಂದು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರನ್ನು ಅನಿಲ್, ಶಂಕರ್ @ ತುಪ್ಪ, ಮಂಜು ಹಾಗೂ ಹ್ಯಾರಿಸ್ ಎಂದು ಗುರುತಿಸಲಾಗಿದೆ. ಈ ಮೂಲಕ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಕೇಸ್ ನಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಆರೋಪಿಗಳ ಪತ್ತೆಗಾಗಿ ಮೈಸೂರು ಎಸ್ ಪಿ ಸೀಮಾ ಲಾಟ್ಕರ್ 2 ತಂಡಗಳನ್ನು ರಚಿಸಿದ್ದರು. ಇನ್ನು ಪ್ರಕರಣ ಸಂಬಂಧ ಇನ್ನಷ್ಟು ಆರೋಪಿಗಳನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.