alex Certify ಕೆಇಎ ಮೂಲಕ ಶೀಘ್ರವೇ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಇಎ ಮೂಲಕ ಶೀಘ್ರವೇ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ಶೀಘ್ರವೇ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ನಡೆಸಲು ಕ್ರಮ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕೆಸೆಟ್ ನಡೆಯದ ಬಗ್ಗೆ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಧು ಮಾದೇಗೌಡ ಸರ್ಕಾರದ ಗಮನ ಸೆಳೆದಿದ್ದು, ಸಚಿವರು ಉತ್ತರ ನೀಡಿದ್ದಾರೆ.

ಅರ್ಹತೆ ಇರುವ ಯಾವುದೇ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಕೆಇಎ ಮೂಲಕ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ನಡೆಸಲು ಸರ್ಕಾರ ಕ್ರಮ ಕೈಗೊಂಡಿದೆ. ಯುಜಿಸಿ ಸಾಮಾನ್ಯ ಪ್ರಕ್ರಿಯೆ ಪೂರ್ಣಗೊಂಡ ನಂತರ ಕೆ -ಸೆಟ್ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...