ಮೈಸೂರು: ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ಈ ಬಾರಿ ಮಹಿಷ ದಸರಾ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2015 ರಿಂದಲೂ ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ಮಹಿಷ ದಸರಾ ಆಚರಿಸಲಾಗುತ್ತಿದೆ. ಕಳೆದ 5 ವರ್ಷ ಬಿಜೆಪಿ ಸರ್ಕಾರದ ವೇಳೆ ಇದಕ್ಕೆ ಅಡ್ಡಿಯಾಗಿತ್ತು. ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವಾಗಿತ್ತು. ಈ ಬಾರಿ ಮಹಿಷ ದಸರಾ ಆಚರಣೆಗೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಹಿಷ ದಸರಾ ಆಚರಿಸುವ ಬಗ್ಗೆ ಸಮಿತಿಯಿಂದ ಇನ್ನೂ ಅರ್ಜಿ ಹಾಕಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಆಚರಣೆಗೆ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ.
ನಿವೃತ್ತ ಪ್ರಾಧ್ಯಾಪಕ ಪ್ರೊ. ಮಹೇಶ್ ಚಂದ್ರಗುರು ಮಾತನಾಡಿ, ಸರ್ಕಾರಕ್ಕೆ ಬದ್ಧತೆ ಇದ್ದರೆ ದಸರಾ ವೇಳೆಯಲ್ಲಿ ಸರ್ವಧರ್ಮಗಳಿಗೆ ಸೇರಿದವರ ಭಾವಚಿತ್ರ ಇರಿಸಲಿ ಎಂದು ಹೇಳಿದ್ದಾರೆ.