ಬೆಂಗಳೂರು: ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಚಿತ್ರದುರ್ಗ ಸೆಷನ್ಸ್ ಕೋರ್ಟ್ ವಿಚಾರಣೆ ರದ್ದುಗೊಳಿಸುವಂತೆ ಮುರುಘಾ ಶ್ರೀಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜುಲೈ 20ಕ್ಕೆ ಮುಂದೂಡಿದೆ.
ಅಲ್ಲಿಯವರೆಗೆ ಸ್ವಾಮೀಜಿ ವಿರುದ್ಧದ ಸೆಷನ್ಸ್ ಕೋರ್ಟ್ ವಿಚರಣೆಗೆ ನೀಡಲಾಗಿದ್ದ ತಡೆಯಾಜ್ಞೆ ವಿಸ್ತರಿಸಿದೆ.
ಪೋಕ್ಸೋ ಕೇಸ್, ಧಾರ್ಮಿಕ ಸಂಸ್ಥೆಗಳ ದುರ್ಬಳಕೆ, ಎಸ್ ಸಿ ಎಸ್ ಇ ದೌರ್ಜನ್ಯ, ಸಾಕ್ಷ್ಯ ನಾಶ ಸೇರಿದಂತೆ ತಮ್ಮ ವಿರುದ್ಧ ದಾಖಲಾಗಿದ್ದ ಆರೋಪ ಪಟ್ಟಿ ಹಾಗೂ ಆ ಕುರಿತ ಚಿತ್ರದುರ್ಗ ಜಿಲ್ಲಾ ಕೋರ್ಟ್ ನಡೆಸುತ್ತಿರುವ ವಿಚಾರಣೆ ರದ್ದುಗೊಳಿಸುವಂತೆ ಮುರುಘಾ ಶ್ರೀ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ವೇಳೆ ಮುರುಘಾಶ್ರೀ ಪರ ವಕೀಲರು ಹಾಗೂ ಪೊಲೀಸರ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೇಳಿದ್ದಾರೆ. ಕೊನೇ ಬಾರಿ ಕಾಲಾವಕಾಶ ನೀಡಲಾಗುವುದು ಎಂದು ಹೇಳಿದ ಹೈಕೋರ್ಟ್ ನ್ಯಾಯಾಧೀಶರು ಅರ್ಜಿ ವಿಚಾರಣೆ ಜು.20ಕ್ಕೆ ಮುಂದೂಡಿದ್ದಾರೆ. ಅಲ್ಲಿಯವರೆಗೆ ಸೆಷನ್ಸ್ ಕೋರ್ಟ್ ವಿಚಾರಣೆಯ ತಡೆಯಾಜ್ಞೆ ವಿಸ್ತರಿಸಿದ್ದಾರೆ.