ಬೆಂಗಳೂರು : ಬೆಂಗಳೂರಿನ ಅಮೃತಹಳ್ಳಿಯಲ್ಲಿ ಏರೋನಿಕ್ಸ್ ಕಂಪನಿ ಸಿಇಒ, ಎಂ.ಡಿ. ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹುಡುಗಿ ವಿಚಾರಕ್ಕೆ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ.
ಜಿನೆಟ್ ಕಂಪನಿಯಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದ ಹತ್ಯೆಗೀಡಾದ ಫಣೀಂದ್ರ ಹಾಗೂ ಆರೋಪಿ ಫಿಲಿಕ್ಸ್ ಜೊತೆಗೆ ಕೆಲಸ ಮಾಡುತ್ತಿದ್ದರು. ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹುಡುಗಿ ಜೊತೆಗೆ ಫಣೀಂದ್ರ ತುಂಬಾ ಕ್ಲೋಸ್ ಆಗಿದ್ದ. ಹೀಗಾಗಿ ನಮ್ಮ ಹುಡುಗಿ ವಿಚಾರಕ್ಕೆ ಬಂದ್ರೆ ನಿನ್ನನ್ನು ಮುಗಿಸುತ್ತೇನೆ ಎಂದು ಫಿಲಿಕ್ಸ್ ಆವಾಜ್ ಹಾಕಿದ್ದ ಎನ್ನಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ಫಿಲೆಕ್ಸ್, ವಿನಯ್ ರೆಡ್ಡಿ, ಶಿವು ಬಂಧಿತ ಆರೋಪಿಗಳು, ಸದ್ಯಕ್ಕೆ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಬೆಂಗಳೂರಿನ ಪಂಪಾ ಬಡಾವಣೆಯಲ್ಲಿ ಏರೋನಿಕ್ಸ್ ಇಂಟರ್ನೆಟ್ ಕಂಪನಿಯ MD ಫಣೀಂದ್ರ ಹಾಗೂ CEO ವಿನಯ್ ಕುಮಾರ್ ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಕಂಪನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಕಂಪನಿ ಬಿಟ್ಟು ಸ್ವಂತ ಉದ್ಯೋಗ ಶುರು ಮಾಡಿದ ಫೆಲಿಕ್ಸ್ ಈ ಕೃತ್ಯ ಎಸಗಿದ್ದಾರೆ.