ಬೆಂಗಳೂರು : ನನಗೆ ಬಂದಿರುವ ಮಾಹಿತಿ ಪ್ರಕಾರ ನಿಮ್ಮನ್ನು ವಿರೋಧ ಪಕ್ಷದ ನಾಯಕ ಮಾಡಲ್ಲ ಎಂದು ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಿಎಂ ಸಿದ್ದರಾಮಯ್ಯ ಕಿಚಾಯಿಸಿದ್ದಾರೆ.
ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿರುವಾಗ ಉಚಿತ ಭಾಗ್ಯಗಳ ಬಗ್ಗೆ ಯತ್ನಾಳ್ ದನಿ ಎತ್ತಿದರು. ಅವರಿಗೂ ಫ್ರೀ..ನಿನಗೂ ಫ್ರೀ ಎಂದು ಹೇಳಿದ್ದರು. ಈಕೆ ಕಂಡೀಷನ್ ಹಾಕಿದ್ದಾರೆ..ಹಾಗೆ ಹೀಗೆ…ಎಂದು ಯತ್ನಾಳ್ ಎದ್ದು ನಿಂತು ಮಾತನಾಡಲು ಶುರು ಮಾಡಿದರು. ಅದಕ್ಕೆ ಕಿಚಾಯಿಸಿದ ಸಿಎಂ ಸಿದ್ದರಾಮಯ್ಯ ನೀವು ಸದನದಲ್ಲಿ ಪದೇ ಪದೇ ಎದ್ದು ನಿಂತು ಮಾತನಾಡಿದ್ರೆ ನಿಮ್ಮನ್ನು ವಿರೋಧ ಪಕ್ಷದ ನಾಯಕ ಮಾಡಲ್ಲ, ಸುಮ್ಮನೆ ಕೊತ್ಕೊಳ್ಳಿ.. ಎಂದು ಯತ್ನಾಳ್ ಗೆ ಸಿಎಂ ಸಿದ್ದರಾಮಯ್ಯ ಕಿಚಾಯಿಸಿದ್ದಾರೆ. ಈ ವೇಳೆ ಸದನದಲ್ಲಿ ಎಲ್ಲರೂ ನಕ್ಕರು.
ಸದನದಲ್ಲಿ ಸ್ವಾರಸ್ಯಕರ ಚರ್ಚೆ
ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ಬಿಜೆಪಿ ನಾಯಕರು ಕಿತ್ತಾಡ್ತಾ ಇದ್ದಾರೆ. ವಿಪಕ್ಷ ನಾಯಕನ ಆಯ್ಕೆ ವಿಚಾರ ಹೆಚ್.ಡಿ. ಕುಮಾರಸ್ವಾಮಿಯವರ ಮನೆ ಬಾಗಿಲಿಗೆ ಬರಲಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ.ವಿಧಾನಸಭೆಯಲ್ಲಿ ವಿಪಕ್ಷ ನಾಯಕನ ಬಗ್ಗೆ ಮಾತನಾಡಿದ ಜಿ.ಟಿ. ದೇವೇಗೌಡ, ರಾಜ್ಯ ಬಿಜೆಪಿ ನಾಯಕರು ಕಚ್ಚಾಡುತ್ತಿದ್ದಾರೆ. ನೋಡ್ತಾ ಇರಿ. ಕುಮಾರಸ್ವಾಮಿಯವರೇ ವಿರೋಧ ಪಕ್ಷದ ನಾಯಕನಾಗ್ತಾರೆ. ಕುಮಾರಸ್ವಾಮಿಯವರೇ, ವಿಪಕ್ಷ ನಾಯಕನ ಸ್ಥಾನ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಎಂದು ಹೇಳಿದರು. ಇದೇ ವೇಳೆ ಮಾಜಿ ಸಿಎಂ ಬಿ ಎಸ್ ವೈ ಅವರನ್ನು ಸಿಎಂ ಸ್ಥಾನದಿಂದ ಯಾಕೆ ಕೆಳಗಿಳಿಸಿದರು ಗೊತ್ತಿಲ್ಲ. ಇಲ್ಲಿ ಬಿಜೆಪಿ ವಿಪಕ್ಷ ನಾಯಕನಿಲ್ಲ. ಲೋಕಸಭೆಯಲ್ಲಿ ಕಾಂಗ್ರೆಸ್ ನ ವಿಪಕ್ಷ ನಾಯಕ ಇಲ್ಲ ಎಂದು ಟಾಂಗ್ ನೀಡಿದರು