ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಉತ್ತರ ಭಾರತದ ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಸಾಂಕ್ರಾಮಿಕ ರೋಗ ಭೀತಿ ಶುರುವಾಗಿದೆ. ಇದೇ ವೇಳೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯೂ ಕೊಂಚ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 46 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿವೆ. ಕೋವಿಡ್ ಸಕ್ರಿಯ ಪ್ರಕರಣ 1,413ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಈವರೆಗೆ 5,31,913 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 4,44,61,339 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 700 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,43,936 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 52,920 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.