HomeKarnatakaರಾತ್ರಿ ವೇಳೆ ಹೊಂಚು ಹಾಕಿ ಒಂಟಿ ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಮೂವರು ಅರೆಸ್ಟ್

ರಾತ್ರಿ ವೇಳೆ ಹೊಂಚು ಹಾಕಿ ಒಂಟಿ ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಮೂವರು ಅರೆಸ್ಟ್

ಬೆಂಗಳೂರು: ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ನಗದು, ಮಾರಕಾಸ್ತ್ರ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಅಭಿಷೇಕ್, ಶರತ್ ಮತ್ತು ಮಧು ಎಂಬುವರನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತರಿಂದ 4 ಲಕ್ಷ ರೂ. ನಗದು ಕೃತ್ಯಕ್ಕೆ ಬಳಸಿದ್ದ ಮಚ್ಚು ಜಪ್ತಿ ಮಾಡಲಾಗಿದೆ. ರಾತ್ರಿ ವೇಳೆ ರಸ್ತೆಯಲ್ಲಿ ಹೊಂಚು ಹಾಕಿ ಕಾಯುತ್ತಿದ್ದ ಆರೋಪಿಗಳು ಒಂಟಿಯಾಗಿ ಬರುವ ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular