ಬೆಂಗಳೂರು: ಜಮೀನಿನ ಮಾರ್ಗಸೂಚಿ ದರ ಪರಿಷ್ಕರಣೆಯಾಗಿ ನಾಲ್ಕೂವರೆ ವರ್ಷಗಳಾಗಿದ್ದು, ಮಾರ್ಗಸೂಚಿತರ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ತುಳಸಿ ಮುನಿರಾಜು ಗೌಡ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದು, ಮುದ್ರಾಂಕ ಶುಲ್ಕ ಹೆಚ್ಚಳದ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲವೆಂದು ತಿಳಿಸಿದ್ದಾರೆ.
ಜಮೀನಿನ ಮಾರ್ಗಸೂಚಿ ದರ ಪರಿಷ್ಕರಿಸಲು ಚಿಂತನೆ ನಡೆದಿದೆ. ನಾಲ್ಕೂವರೆ ವರ್ಷಗಳಿಂದ ಮಾರ್ಗಸೂಚಿ ದರ ಪರಿಷ್ಕರಣೆಯಾಗದೆ ಜಮೀನು ಮಾರಾಟದ ವೇಳೆ ರೈತರಿಗೆ ಸೂಕ್ತ ದರ ಸಿಗುತ್ತಿಲ್ಲ. ಸರ್ಕಾರದ ಯೋಜನೆಗಳ ಸಂಬಂಧ ಭೂಸ್ವಾಧೀನದ ವೇಳೆಯಲ್ಲಿ ಕೂಡ ರೈತರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ವೈಜ್ಞಾನಿಕವಾಗಿ ಜಮೀನು ಮಾರ್ಗಸೂಚಿ ದರ ಪರಿಷ್ಕರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.