HomeIndiaಇಂದಿನಿಂದ ಮೋದಿ ವಿದೇಶ ಪ್ರವಾಸ: ಫ್ರಾನ್ಸ್, ಯುಎಇಗೆ ಭೇಟಿ

ಇಂದಿನಿಂದ ಮೋದಿ ವಿದೇಶ ಪ್ರವಾಸ: ಫ್ರಾನ್ಸ್, ಯುಎಇಗೆ ಭೇಟಿ

ನವದೆಹಲಿ: ಇಂದಿನಿಂದ ಎರಡು ದಿನ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಫ್ರಾನ್ಸ್ ಮತ್ತು ಯುಎಇಗೆ ಭೇಟಿ ನೀಡಲಿದ್ದಾರೆ.

ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ ಆಹ್ವಾನದ ಮೇರೆಗೆ ಭೇಟಿ ನೀಡಲಿರುವ ಮೋದಿ ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಭಾರತ ಮತ್ತು ಫ್ರಾನ್ಸ್ ನಡುವಿನ ಸಂಬಂಧಕ್ಕೆ 25 ವರ್ಷ ಹಿನ್ನೆಲೆಯಲ್ಲಿ ಉಭಯ ನಾಯಕರ ನಡುವೆ ಹಲವು ಮಹತ್ವದ ವಿಷಯಗಳು ಚರ್ಚೆಯಾಗಲಿವೆ. ರಫೆಲ್ ಯುದ್ಧ ವಿಮಾನ, ಸಬ್‌ ಮೆರಿನ್ ಖರೀದಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು. ಉದ್ಯಮಿಗಳು, ಗಣ್ಯರು, ಅನಿವಾಸಿ ಭಾರತೀಯರ ಜತೆ ಮೋದಿ ಸಂವಾದ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ ಪ್ರಧಾನಿ ಮೋದಿ ಯುಎಇಗೆ ಭೇಟಿ ನೀಡಲಿದ್ದಾರೆ. ಯುಎಇ ಅಧ್ಯಕ್ಷ ಮೊಹಮ್ಮದ್ ಜಯೇದ್ ನಹ್ಯಾನ್ ಅವರನ್ನು ಭೇಟಿಯಾಗಲಿದ್ದಾರೆ. ಹಲವು ವಿಚಾರಗಳ ಬಗ್ಗೆ ಉಭಯ ನಾಯಕರ ನಡುವೆ ಸಮಾಲೋಚನೆ ನಡೆಯಲಿದೆ. ನಂತರ ಅಬುಧಾಬಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ. ಮೋದಿಯವರನ್ನು ಯುಎಇ ಅಧ್ಯಕ್ಷ, ಅರಸ ಮೊಹಮ್ಮದ್ ಜಯೇದ್ ನಹ್ಯಾನ್ ಸನ್ಮಾನಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular