HomeCrimeSHOCKING NEWS: ಮನೆಗೆ ನುಗ್ಗಿ ಮಹಿಳೆ ಹತ್ಯೆಗೈದು ಮಗುವನ್ನು ಹೊತ್ತೊಯ್ದ ಕಿರಾತಕ...!

SHOCKING NEWS: ಮನೆಗೆ ನುಗ್ಗಿ ಮಹಿಳೆ ಹತ್ಯೆಗೈದು ಮಗುವನ್ನು ಹೊತ್ತೊಯ್ದ ಕಿರಾತಕ…!

ಬೆಂಗಳೂರು: ಮನೆಗೆ ನುಗ್ಗಿದ ದುಷ್ಕರ್ಮಿ ಮಹಿಳೆಯನ್ನು ಹತ್ಯೆಗೈದು 5 ವರ್ಷದ ಮಗುವನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ದಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ.

ಭಾರತಿ (27) ಮೃತ ಮಹಿಳೆ. ಪತಿ ಇಲ್ಲದ ವೇಳೆ ಮನೆಗೆ ನುಗ್ಗಿರುವ ದುಷ್ಕರ್ಮಿ ಮಹಿಳೆಯನ್ನು ಕೊಲೆಗೈದು ಪರಾರಿಯಾಗಿದ್ದಾನೆ. ದಂಪತಿಯ 5 ವರ್ಷದ ಮಗು ನಾಪತ್ತೆಯಾಗಿದ್ದು, ಕೊಲೆಗಾರನೇ ಕಿಡ್ನ್ಯಾಪ್ ಮಾಡಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತಿ ಮನೆಗೆ ಬಂದು ನೋಡಿದಾಗ ಪತ್ನಿ ಬರ್ಬರವಾಗಿ ಕೊಲೆಯಾಗಿರುವುದು ಗೊತ್ತಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular