HomeAgriculture'ಫಸಲ್ ಭೀಮಾ ವಿಮಾ' ಯೋಜನೆ ಕುರಿತಂತೆ ರೈತರಿಗೆ ಮುಖ್ಯ ಮಾಹಿತಿ

‘ಫಸಲ್ ಭೀಮಾ ವಿಮಾ’ ಯೋಜನೆ ಕುರಿತಂತೆ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು ನಗರ ಜಿಲ್ಲೆ : ಜಿಲ್ಲೆಯಲ್ಲಿ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು” 2023 ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಬೆಂಗಳೂರು ನಗರ ಜಿಲ್ಲೆಗೆ ಮುಖ್ಯ ಬೆಳೆಯಾಗಿ ರಾಗಿ (ಮಳೆಯಾಶ್ರಿತ) ಹಾಗೂ ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ), ಮತ್ತು ಟೊಮ್ಯಾಟೋ ಬೆಳೆಗಳನ್ನು ಇತರೆ ಬೆಳೆಗಳಾಗಿ ಅಧಿಸೂಚಿಸಲಾಗಿದ್ದು, ಟೊಮ್ಯಾಟೋ ಬೆಳೆಗೆ ಜುಲೈ 15, ರಾಗಿ , ಭತ್ತ ಮತ್ತು ಮುಸುಕಿನ ಜೋಳ ಬೆಳೆಗಳಿಗೆ ಆಗಸ್ಟ್ 16 ವಿಮೆಗೆ ನೋಂದಾಯಿಸಲು ಕೊನೆಯ ದಿನಾಂಕವಿದ್ದು, ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ (Common Service Centre), ಕರ್ನಾಟಕ ಒನ್ ಅಥವಾ ಬ್ಯಾಂಕ್ ಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿ ನಿಧಿಯನ್ನು ಸಂಪರ್ಕಿಸಬಹುದಾಗಿದೆ. ಆಯ್ಕೆಯಾಗಿರುವ ವಿಮಾ ಸಂಸ್ಥೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜನರಲ್ ಇನ್ಯೂರನ್ಸ್ ಕಂಪೆನಿ ಲಿ. (ಟೋಲ್ ಪ್ರೀ ನಂ: 1800-209-1111). ವಿಮಾ ಸಂಸ್ಥೆಯ ಪ್ರತಿನಿಧಿಗಳ ದೂರವಾಣಿ ಸಂಖ್ಯೆ- ಜಿಲ್ಲಾ ಪ್ರತಿನಿಧಿ: ನರಿಂದರ್ ಕುಮಾರ್ (ಮೊ. 7575850666), ತಾಲ್ಲೂಕು ಪ್ರತಿನಿಧಿಗಳು: ಆನೇಕಲ್- ಕುಮಾರಸ್ವಾಮಿ (8123303951), ಬೆಂ.ದಕ್ಷಿಣ ಮತ್ತು ಯಲಹಂಕ- ಜುನೈದ್ ಅಹಮದ್ (8892767860), ಬೆಂ. ಉತ್ತರ ಮತ್ತು ಬೆಂ. ಪೂರ್ವ- ನರಿಂದರ್ ಕುಮಾರ್ (ಮೊ.7575850666) ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular