ಸದನದಲ್ಲಿ ಕೊಬ್ಬರಿ ಪ್ರದರ್ಶಿಸಿದ ರೇವಣ್ಣ : ಯಾಕೆ ನಿಂಬೆಹಣ್ಣು ತಂದಿಲ್ವಾ? ಎಂದು ಕಾಲೆಳೆದ ಸಿಎಂ

ಬೆಂಗಳೂರು : ಸದನದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಸ್ವಾರಸ್ಯಕರ ಪ್ರಸಂಗಗಳು ನಡೆಯುತ್ತಲೇ ಇರುತ್ತದೆ. ಇಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿಧಾನಸೌಧಕ್ಕೆ ಕೊಬ್ಬರಿ ತಂದಿದ್ದಾರೆ.

ಸದನದಲ್ಲಿ ಕೊಬ್ಬರಿ ಪ್ರದರ್ಶಿಸಿದ ರೇವಣ್ಣನನ್ನು ಸಿಎಂ ಸಿದ್ದರಾಮಯ್ಯ ಕಾಲೆಳೆದಿದ್ದಾರೆ. ಅಲ್ಲಾ..ರೀ ರೇವಣ್ಣ ಈ ಬಾರಿ ಕೊಬ್ಬರಿ ಹಿಟ್ಕೊಂಡು ಬಂದಿದ್ದೀರಾ..? ಯಾಕೆ ನಿಂಬೆಹಣ್ಣು ತಂದಿಲ್ವಾ..? ಎಂದು ಸಿಎಂ ಸಿದ್ದರಾಮಯ್ಯ ಕಾಲೆಳೆದಿದ್ದಾರೆ. ಸಿದ್ದರಾಮಯ್ಯ ಕಾಮಿಡಿಗೆ ಸದನದಲ್ಲಿ ಎಲ್ಲರೂ ನಕ್ಕಿದ್ದಾರೆ.

ಬೆಲೆ ಕುಸಿತದ ಹಿನ್ನಲೆಯಲ್ಲಿ ಕಂಗಾಲಾಗಿದ್ದ ಕೊಬ್ಬರಿ ಬೆಳೆಗಾರರ ನೆರವಿಗೆ ಕರ್ನಾಟಕ ಸರ್ಕಾರ ಧಾವಿಸಿದೆ. ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರವು ಪ್ರೋತ್ಸಾಹಧನವನ್ನು ಘೋಷಣೆ ಮಾಡಿದೆ. ಬುಧವಾರದಿಂದಲೇ ಜಾರಿಗೆ ಬರುವಂತೆ ಕ್ವಿಂಟಾಲ್ ಕೊಬ್ಬರಿಗೆ 1,250 ರೂ. ಪ್ರೋತ್ಸಾಹಧನವನ್ನು ಘೋಷಣೆ ಮಾಡಲಾಗಿದೆ. ದರ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಸರ್ಕಾರ ಬರಬೇಕು ಎಂದು ವಿಪಕ್ಷಗಳು ಸರ್ಕಾರವನ್ನು ಒತ್ತಾಯಿಸಿತ್ತು.

ಪೆನ್ ಡ್ರೈವ್ ನಲ್ಲಿರೋದೇ ಬೇರೆ ಸಬ್ಜೆಕ್ಟ್ : ಕಾಂಗ್ರೆಸ್ ನವರಿಗೆ ಆತುರವೇಕೆ ? ಎಂದ HDK

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿ ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿ ಹೇಳಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಪೆನ್ ಡ್ರೈವ್ ಬಿಡುಗಡೆಗೆ ಕಾಂಗ್ರೆಸ್ ನವರಿಗೆ ಆತುರ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಪೆನ್ ಡ್ರೈವ್ ನಲ್ಲಿರೋದೇ ಬೇರೆ ಸಬ್ಜಕ್ಟ್. ಈಗ ನಾನು ಹೇಳುತ್ತಿರುವ ದರ ಪಟ್ಟಿಯೇ ಬೇರೆ. ಪೆನ್ ಡ್ರೈವ್ ಬಿಡುಗಡೆಗೆ ಕಾಂಗ್ರೆಸ್ ನವರಿಗೆ ಯಾಕಿಷ್ಟು ಆತುರ? ಪೆನ್ ಡ್ರೈವ್ ಖಾಲಿಯೇನೂ ಇಲ್ಲ, ಈ ಪೆನ್ ಡ್ರೈವ್ ಆಪರೇಷನ್ ಮಾಡಿದ ಸಿಡಿ ರೀತಿ ಅಲ್ಲ. ಪೆನ್ ಡ್ರೈವ್ ಬಿಡುಗಡೆಗೆ ಇನ್ನೂ ಬೇಕಾದಷ್ಟು ಸಮಯವಿದೆ. ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read