HomeKarnatakaಬಜೆಟ್ ನಲ್ಲಿ ಉಪಯುಕ್ತ ಯೋಜನೆ: ವೀರೇಂದ್ರ ಹೆಗ್ಗಡೆ ಶ್ಲಾಘನೆ

ಬಜೆಟ್ ನಲ್ಲಿ ಉಪಯುಕ್ತ ಯೋಜನೆ: ವೀರೇಂದ್ರ ಹೆಗ್ಗಡೆ ಶ್ಲಾಘನೆ

ರಾಜ್ಯ ಬಜೆಟ್ ನಲ್ಲಿ ಜನರಿಗೆ ಉಪಯುಕ್ತ ಯೋಜನೆ ನೀಡಿರುವುದಕ್ಕೆ ಅಭಿನಂದನೆ ತಿಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಪತ್ರ ಬರೆದಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ವೀರೇಂದ್ರ ಹೆಗಡೆ ಅವರು, ಧರ್ಮಸ್ಥಳಕ್ಕೆ ಬರುವ ಭಕ್ತರು ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ 14ನೇ ಬಜೆಟ್ ಮಂಡಿಸಿದ ನಿಮಗೆ ಅಭಿನಂದನೆಗಳು. ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ. ಬಜೆಟ್ ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಅಭಿನಂದನೆಗಳು. ಮಂಜುನಾಥ ಸ್ವಾಮಿಯ ಅನುಗ್ರಹ ನಿಮ್ಮ ಮೇಲಿರಲಿ ಎಂದು ಪತ್ರದಲ್ಲಿ ವೀರೇಂದ್ರ ಹೆಗಡೆ ಹಾರೈಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular