alex Certify ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ

ಶಿವಮೊಗ್ಗ: ನೇಣು ಹಾಕಿಕೊಂಡ ಸ್ಥಿತಿಯಲ್ಲಿ ದಂಪತಿ ಶವ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಜನ್ನಾಪುರದಲ್ಲಿ ಗುರುವಾರ ಘಟನೆ ನಡೆದಿದೆ.

ಜನ್ನಾಪುರದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಕೆ.ಎಸ್. ಮಧು(27) ಮತ್ತು ಅವರ ಪತ್ನಿ ಮೋನಿಕಾ(21) ಮೃತಪಟ್ಟವರು. ಅವರ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಗುರುವಾರ ದಂಪತಿ ಬಹಳ ಹೊತ್ತಾದರೂ ಮನೆಯಿಂದ ಹೊರಗೆ ಬಾರದ ಹಿನ್ನೆಲೆಯಲ್ಲಿ ಅಕ್ಕಪಕ್ಕದವರಿಗೆ ಅನುಮಾನ ಬಂದು ಬಾಗಿಲು ತೆಗೆದು ಪರಿಶೀಲಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ ಪತ್ತೆಯಾಗಿದ್ದಾರೆ. ನ್ಯೂಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...