ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ತಲೆಎತ್ತಿದ್ದು, ಮಾರಕಾಸ್ತ್ರಗಳನ್ನು ಹಿಡಿದು ಹಲವಡೆ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ.
ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಈ ಚಡ್ಡಿ ಗ್ಯಾಂಗ್ ಕಾಣಿಸಿಕೊಂಡಿದ್ದು, ಮುಖಕ್ಕೆ ಕರ್ಚಿಪ್ ಕಟ್ಟಿಕೊಂಡು ಬೆಂಗಳೂರಿನ ಶ್ರೀಮಂತ ಏರಿಯಾಗಳಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಕೈಯಲ್ಲಿ ಮಾರಾಕಾಸ್ತ್ರಗಳನ್ನು ಹಿಡಿದ ಚಡ್ಡಿ ಗ್ಯಾಂಗ್ ಆನೆಕಲ್ ತಾಲೂಕಿನ ಸರ್ಜಾಪುರ ರಸ್ತೆ ಸುತ್ತಮುತ್ತಲಿನ ವಿಲ್ಲಾ, ಅಪಾರ್ಟ್ ಮೆಂಟ್ ಗಳಲ್ಲಿ ಕಳ್ಳತನಕ್ಕೆ ಯತ್ನಿಸಿರುವ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ಕ್ಯಾಮರಾ ನೋಡಿ ರಾತ್ರಿ ಸಾರ್ವಜನಿಕರು ಅಲರ್ಟ್ ಆಗಿದ್ದು, ಕಳ್ಳರ ಬಗ್ಗೆ ಸರ್ಜಾಪುರ ಪೊಲೀಸರಿಗೆ ಸ್ಥಳೀಯರು ದೂರು ನೀಡಿದ್ದಾರೆ.