HomeIndiaBREAKING NEWS: ಬಟ್ಟೆ ತಯಾರಿಕಾ ಕಾರ್ಖಾನೆ ಗೋಡೌನ್ ಗೆ ಬೆಂಕಿ; 15ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು...

BREAKING NEWS: ಬಟ್ಟೆ ತಯಾರಿಕಾ ಕಾರ್ಖಾನೆ ಗೋಡೌನ್ ಗೆ ಬೆಂಕಿ; 15ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು…!

ಮಹಾರಾಷ್ಟ್ರದ ಪುಣೆಯಲ್ಲಿರುವ ಬಟ್ಟೆ ತಯಾರಿಕಾ ಕಾರ್ಖಾನೆಯ ಗೋಡೌನ್ ಗೆ ಇಂದು ಬೆಳಿಗ್ಗೆ ಬೆಂಕಿ ತಗುಲಿದ್ದು, ವ್ಯಾಪಕವಾಗಿ ಆವರಿಸಿರುವ ಕಾರಣ ಇದನ್ನು ನಂದಿಸಲು 15 ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ.

ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಾಚಿದ್ದು, ದಟ್ಟ ಹೊಗೆ ಆವರಿಸಿದೆ. ಶಾರ್ಟ್ ಸರ್ಕ್ಯೂಟ್ ಪರಿಣಾಮ ಈ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗಿದೆ.

ಈವರೆಗೆ ಯಾವುದೇ ಸಾವು ನೋವಿನ ಪ್ರಕರಣ ವರದಿಯಾಗಿಲ್ಲ. ಬೆಂಕಿ ಅವಘಡದ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular