HomeKarnatakaಕಾಂಗ್ರೆಸ್ ಸರ್ಕಾರ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡುತ್ತಿದೆ : ಮಾಜಿ ಸಚಿವ ಆರ್. ಅಶೋಕ್...

ಕಾಂಗ್ರೆಸ್ ಸರ್ಕಾರ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡುತ್ತಿದೆ : ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಜನರಿಗೆ ಗ್ಯಾರಂಟಿ ಗಳನ್ನು ನೀಡಿ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಹಾಳು ಮಾಡುತ್ತಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಕೋಡ್ತೀವಿ ಅಂತಾ ಹೇಳಿ ಜನರ ಮೂಗಿಗೆ ತುಪ್ಪ ಸವರಿದೆ. ಉಚಿತ ಕೊಡಿ ಅಂತಾ ಜನರು ಯಾರೂ ಕೇಳಿರಲಿಲ್ಲ. ಈಗಾಗಲೇ ಟೊಮೆಟೊ ಬೆಲೆ ಸೇರಿ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಕಿಡಿಕಾರಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರ ಜನರಿಗೆ ಮತ್ತೊಂದು ಬರೆ ಎಳೆಯಲು ಮುಂದಾಗಿದ್ದು, ಹಾಲಿನ ದರ ಏರಿಕೆ ಮಾಡಲು ಹೊರಟಿದೆ. ಸರ್ಕಾರ 5 ಗ್ಯಾರಂಟಿಗಳನ್ನು ಕೊಟ್ಟು, ಎರಡು ಕೈಗಳಿಂದ ಕಿತ್ತುಕೊಳ್ಳುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular