ಬೆಂಗಳೂರು : ಪ್ರಧಾನಿ ಮೋದಿ ಜನಪ್ರಿಯತೆ ದಿನೇ ದಿನೆ ಕುಸಿಯುತ್ತಿದೆ, ಬಿಜೆಪಿ ಅವನತಿ ಕರ್ನಾಟಕದಿಂದಲೇ ಆರಂಭವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ’ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಕ್ಷ ಗೆದ್ದಿದೆ. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಯಾವತ್ತೂ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿಲ್ಲ’ ಎಂದರು.
ನಾವು ವಿವಿಧ ಯೋಜನೆಗಳ ಮೂಲಕ ಜನರಿಗೆ ಹಣ ನೀಡುತ್ತೇವೆ. ಆದರೆ ಬಿಜೆಪಿಗರು ಜನರ ಜೇಬಿನಿಂದ ಹಣ ಕಿತ್ತುಕೊಂಡರು, ಬಿಜೆಪಿ 2 ಬಾರಿಯೂ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆ ಎಂದು ಸಿಎಂ ಸಿದ್ದರಾಮಮಯ್ಯ ವಾಗ್ಧಾಳಿ ನಡೆಸಿದ್ದಾರೆ.