HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆ; 24 ಗಂಟೆಯಲ್ಲಿ 52 ಜನರಲ್ಲಿ ಹೊಸದಾಗಿ...

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆ; 24 ಗಂಟೆಯಲ್ಲಿ 52 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ


ನವದೆಹಲಿ: ದೇಶದಲ್ಲಿ ವರುಣಾರ್ಭಟ, ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 52 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿದೆ.

1396 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಈವರೆಗೆ 531914 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44461455 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 445 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,46,704 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 57,206 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular