ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿ ಪ್ರಕಟಿಸಿದೆ.
ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರತಿ ಒಂದು ಸಾವಿರ ಜನಸಂಖ್ಯೆ ಅಥವಾ ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಓರ್ವ ಮಹಿಳಾ ಪ್ರಜಾಪ್ರತಿನಿಧಿ ಸೇರಿ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ.
ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ ಖಾತೆಗೆ ಮಾಸಿಕ 2 ಸಾವಿರ ರೂ. ಜಮಾ ಮಾಡಲಾಗುವುದು.
ಗೃಹಲಕ್ಷ್ಮಿ ಯೋಜನೆಗೆ ಆಧಾರ್ ಕಡ್ಡಾಯವಲ್ಲ, ಮನೆಯ ಯಜಮಾನಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗಿರದಿದ್ದರೂ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2,000 ರೂ. ನೆರವು ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.