alex Certify BIGG NEWS : `KEA’ ಮೂಲಕ ಶೀಘ್ರವೇ `ಕೆ-ಸೆಟ್’ ಪರೀಕ್ಷೆ : ಎಂ.ಸಿ. ಸುಧಾಕರ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `KEA’ ಮೂಲಕ ಶೀಘ್ರವೇ `ಕೆ-ಸೆಟ್’ ಪರೀಕ್ಷೆ : ಎಂ.ಸಿ. ಸುಧಾಕರ್ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಬಗ್ಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಮಹತ್ವದ ಮಾಹಿತಿ ನೀಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ಶೀಘ್ರದಲ್ಲಿ ಕೆ-ಸೆಟ್ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ನಡೆಸಲು  ನಿರ್ಧರಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಆದಷ್ಟು ಬೇಗ ಪರೀಕ್ಷೆ ನಡೆಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಮೈಸೂರು ವಿಶ್ವವಿದ್ಯಾಲಯವು 2021 ಜುಲೈ ನಲ್ಲಿ ನಡೆಸಿದ ಕೆ-ಸೆಟ್ ಪರೀಕ್ಷೆಯಲ್ಲಿ ನಡೆದ ಅವ್ಯವಹಾರಗಳ ಹಿನ್ನಲೆಯಲ್ಲಿ 2022ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...