alex Certify ಟ್ರೇಡ್ ಲೈಸನ್ಸ್ ಗೆ ಲಂಚ; ಅಧಿಕಾರಿಯನ್ನು ಸಿನಿಮೀಯ ರೀತಿಯಲ್ಲಿ ಚೇಜ್ ಮಾಡಿ ಬಂಧಿಸಿದ ಲೋಕಾಯುಕ್ತ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರೇಡ್ ಲೈಸನ್ಸ್ ಗೆ ಲಂಚ; ಅಧಿಕಾರಿಯನ್ನು ಸಿನಿಮೀಯ ರೀತಿಯಲ್ಲಿ ಚೇಜ್ ಮಾಡಿ ಬಂಧಿಸಿದ ಲೋಕಾಯುಕ್ತ ಪೊಲೀಸರು

ಬೆಂಗಳೂರು: ಟ್ರೇಡ್ ಲೈಸನ್ಸ್ ಗಾಗಿ ಲಂಚ ಪಡೆಯುತ್ತಿದ್ದ ಆಹಾರ ನಿರೀಕ್ಷಕನನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಆಹಾರ ನಿರೀಕ್ಷಕ ಮಹಾಂತೇಗೌಡ ಬಂಧಿತ ಅಧಿಕಾರಿ. ಕೆ.ಜಿ. ಸರ್ಕಲ್ ಬಳಿ ಇರುವ ತಹಶೀಲ್ದಾರ್ ಕಚೇರಿಯಲ್ಲಿ ಆಹಾರ ನಿರೀಕ್ಷಕರಾಗಿರುವ ಮಹಾಂತೇಗೌಡ, ರಂಗಧಾಮಯ್ಯ ಬಳಿ 1 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಮುಂಗಡವಾಗಿ 43 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಪೊಲೀಸರನ್ನು ನೋಡುತ್ತಿದ್ದಂತೆ ಮಹಂತೇಗೌಡ ಕಾರಿನಲ್ಲಿ ಪರಾರಿಯಾಗಿದ್ದಾರೆ. ಬೆನ್ನಟ್ಟಿದ ಪೊಲೀಸರು ಸುಮಾರು 15 ಕಿ.ಮೀ ಚೇಸ್ ಮಾಡಿ ಕಾರು ಅಡ್ಡಗಟ್ಟಿ ಸೆರೆ ಹಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...