HomeKarnatakaBIG NEWS: ನೀರಾವರಿ ಯೋಜನೆಯಲ್ಲಿ ಭಾರಿ ಅವ್ಯವಹಾರ; ತನಿಖೆಗೆ ಆದೇಶ

BIG NEWS: ನೀರಾವರಿ ಯೋಜನೆಯಲ್ಲಿ ಭಾರಿ ಅವ್ಯವಹಾರ; ತನಿಖೆಗೆ ಆದೇಶ

ಕೋಲಾರ: ನಿರಾವರಿ ಯೋಜನೆಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಯರಗೋಳ್ ನೀರಾವರಿ ಯೋಜನೆಯಲ್ಲಿ ಅವ್ಯವಹಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶ ನೀಡಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ ಗ್ರಾಮದ ಬಳಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯು 160 ಕೋಟಿ ವೆಚ್ಚದಲ್ಲಿ ಯರಗೋಳ ಡ್ಯಾಂ ನಿರ್ಮಾಣ ಮಾಡಿದೆ. ಆದರೆ ಡ್ಯಾಂ ನಿರ್ಮಾಣ, ಪೈಪ್ ಲೈನ್ ಅಳವಡಿಕೆ, ಓವರ್ ಹೆಡ್ ಟ್ಯಾಂಕ್ ನಿರ್ಮಾಣದಲ್ಲಿ ನಿಗದಿಗಿಂತ ಹೆಚ್ಚುವರಿ ಹಣ ಮಂಜೂರು ಮಾಡಿದ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂಬಂಧ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ದೂರಿನ ಮೇರೆಗೆ ಯರಗೋಳ್ ನೀರಾವರಿ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular