HomeKarnatakaಮಾಸ್ಟರ್ ಆನಂದ್ ಪುತ್ರಿ ವಂಶಿಕ ಹೆಸರಿನಲ್ಲಿ ವಂಚನೆ ಕೇಸ್ : ನಿಶಾ ನರಸಪ್ಪ ವಿರುದ್ಧ...

ಮಾಸ್ಟರ್ ಆನಂದ್ ಪುತ್ರಿ ವಂಶಿಕ ಹೆಸರಿನಲ್ಲಿ ವಂಚನೆ ಕೇಸ್ : ನಿಶಾ ನರಸಪ್ಪ ವಿರುದ್ಧ ಮತ್ತೆ 20 ಲಕ್ಷ ರೂ.ದೋಖಾ ಆರೋಪ

ಬೆಂಗಳೂರು : ನಟ, ನಿರೂಪಕ ಮಾಸ್ಟರ್ ಆನಂದ್ ಮಗಳು ವಂಶಿಕ ಹೆಸರಿನಲ್ಲಿ ವಂಚನೆ ಪ್ರಕರಣ ಸಂಬಂಧ ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಯಲಹಂಕ ಪೊಲೀಸ್ ಠಾಣೆಯಲ್ಲಿ ಮತ್ತೆ 20 ಲಕ್ಷ ರೂ. ವಂಚನೆ ಮಾಡಿರುವುದಾಗಿ ದೂರು ದಾಖಲಾಗಿದೆ.

ನಿಶಾ ನರಸಪ್ಪ ಎಂಬ ಮಹಿಳೆ ವಂಶಿಕ ಹೆಸರಿನಲ್ಲಿ ಮಕ್ಕಳ ಪೋಷಕರಿಂದ ಲಕ್ಷ ಲಕ್ಷ ರೂ.ಗಳನ್ನು ಪಡೆದುಕೊಂಡು ವಂಚನೆ ಮಾಡಿದ್ದಾರೆ.  ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದಾಶಿವನಗರದ ಠಾಣೆಯಲ್ಲಿ 35 ಲಕ್ಷ ರೂ. ಯಲಹಂಕ ಠಾಣೆಯಲ್ಲಿ 20 ಲಕ್ಷ ರೂ. ವಂಚನೆ ಮಾಡಿರುವ ದೂರು ದಾಖಲಾಗಿದೆ. ತಾರಾ ಎಂಬುವರಿಗೆ 20 ಲಕ್ಷ ರೂ. ವಂಚನೆ ಮಾಡಲಾಗಿದೆ.

ಮಕ್ಕಳ ಟ್ಯಾಲೆಂಟ್ ಶೋನಲ್ಲಿ ನಿಮ್ಮ ಮಕ್ಕಳಿಗೂ ಅವಕಾಶ ಕೊಡಿಸುವುದಾಗಿ ಹೇಳಿ ನೂರಾರು ಮಂದಿ ಪೋಷಕರಿಂದ ಲಕ್ಷಾಂತರ ರೂ. ವಂಚನೆ ಎಸಗಲಾಗಿದೆ. ಪ್ರಕರಣ ಸಂಬಂಧ ಮಾಸ್ಟರ್ ಆನಂದ್ ಪತ್ನಿ ಯಶಸ್ವಿನಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ನಿಶಾಳನ್ನು ಸದಾಶಿವನಗರ ಪೊಲೀಸರು ವಶಕ್ಕೆ ಪಡೆದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular