HomeKarnatakaGood News : ಮನೆಯ ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್ : ಜುಲೈ 19 ರಿಂದ...

Good News : ಮನೆಯ ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್ : ಜುಲೈ 19 ರಿಂದ `ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಶುರು

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 19 ರಿಂದ ಅರ್ಜಿ ಸಲ್ಲಿಕೆ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ . ಅರ್ಜಿ ಸ್ವೀಕಾರ ಜುಲೈ 19 ರಿಂದ ಆರಂಭವಾಗಲಿದ್ದು, ಆಗಸ್ಟ್ 15ಕ್ಕೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ಗಳಲ್ಲಿ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗಲಿದೆ’ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮಿ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿ ಪ್ರಕಟಿಸಿದೆ.ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರತಿ ಒಂದು ಸಾವಿರ ಜನಸಂಖ್ಯೆ ಅಥವಾ ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಓರ್ವ ಮಹಿಳಾ ಪ್ರಜಾಪ್ರತಿನಿಧಿ ಸೇರಿ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ.ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ ಖಾತೆಗೆ ಮಾಸಿಕ 2 ಸಾವಿರ ರೂ. ಜಮಾ ಮಾಡಲಾಗುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular