ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಹೊಸ ಅನ್ವೇ಼ಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ, ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ರೈತರು ಹಾಗೂ ರೈತ ಮಹಿಳೆಯರು ಜುಲೈ 24 ರ ಒಳಗೆ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಬಹುದಾಗಿದೆ.ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.