HomeKarnatakaGruha Lakshmi Scheme : ‘ಗೃಹಲಕ್ಷ್ಮೀ’ ಯೋಜನೆಗೆ ಯಾರು ಅರ್ಹರು..? ಹೇಗೆ ಅರ್ಜಿ ಸಲ್ಲಿಸಬೇಕು. ಇಲ್ಲಿದೆ...

Gruha Lakshmi Scheme : ‘ಗೃಹಲಕ್ಷ್ಮೀ’ ಯೋಜನೆಗೆ ಯಾರು ಅರ್ಹರು..? ಹೇಗೆ ಅರ್ಜಿ ಸಲ್ಲಿಸಬೇಕು. ಇಲ್ಲಿದೆ ಮಾಹಿತಿ

ಬೆಂಗಳೂರು : ‘ ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ . ರೇಷನ್ ಕಾರ್ಡ್ ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್ಎಂಎಸ್ ಮೂಲಕ ರವಾನೆ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿಗೆ ಅವಕಾಶ ಮಾಡಲಾಗುವುದು ಎಂದರು. ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗಿರತಕ್ಕದ್ದಲ್ಲ ಎಂದರು.

ಗೃಹಲಕ್ಷ್ಮೀ ಯೋಜನೆಗೆ ಯಾರು ಅರ್ಹರು..? ಹೇಗೆ ಅರ್ಜಿ ಸಲ್ಲಿಸಬೇಕು. ಇಲ್ಲಿದೆ ಮಾಹಿತಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1) ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ.

2) ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗಿರತಕ್ಕದ್ದಲ್ಲ.

3) ರೇಷನ್ ಕಾರ್ಡ್ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್ಎಂಎಸ್ ಮೂಲಕ ರವಾನೆ ಮಾಡಲಾಗುವುದು.

4) ‘ಗೃಹಲಕ್ಷ್ಮೀ’ಯೋಜನೆಗೆ ನೋಂದಣಿಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆಯ ಪಾಸ್ ಬುಕ್ ಬೇಕಾಗಿರುತ್ತದೆ. ಒಂದು ವೇಳೆ ಆಧಾರ್ ನಂಬರ್ ಜೋಡಣೆಯಾಗಿರುವ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಆ ಖಾತೆಯ ಪಾಸ್ ಬುಕ್ ಅಗತ್ಯ. ಗ್ರಾಮ ವನ್, ಬಾಪೂಜಿ ಕೇಂದ್ರ, ಕರ್ನಾಟಕ ವನ್, ಬೆಂಗಳೂರು ವನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ. ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ಮನೆಗೆ ತಲುಪಿಸಲಾಗುತ್ತದೆ.

5) ಗೃಹಲಕ್ಷ್ಮೀ’ಯೋಜನೆಗೆ ನೋಂದಣಿಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆಯ ಪಾಸ್ ಬುಕ್ ಅಗತ್ಯ. ಒಂದು ವೇಳೆ ಆಧಾರ್ ನಂಬರ್ ಜೋಡಣೆಯಾಗಿರುವ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಆ ಖಾತೆಯ ಪಾಸ್ ಬುಕ್ ಅಗತ್ಯ. ಗ್ರಾಮ ವನ್, ಬಾಪೂಜಿ ಕೇಂದ್ರ, ಕರ್ನಾಟಕ ವನ್, ಬೆಂಗಳೂರು ವನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ.

6) ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ಮನೆಗೆ ತಲುಪಿಸಲಾಗುವುದು. ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್ ಎಂಎಸ್ ಮೂಲಕ ಮಂಜೂರಾತಿ ಸಂದೇಶ ರವಾನೆ ಮಾಡಲಾಗುತ್ತದೆ. ಫಲಾನುಭವಿಯ ಆಧಾರ್ ಜೋಡಣೆಯಾಗಿರುವ ಖಾತೆಗೆ ಡಿಬಿಟಿ ಮೂಲಕ ಹಣ ಜಮೆ ಮಾಡುತ್ತೇವೆ. ಬೇರೆ ಖಾತೆಗೆ ಆರ್ ಟಿಜಿಎಸ್ ಮೂಲಕ ಹಣ ಜಮೆ ಮಾಡಲಾಗುತ್ತದೆ. ನೋಂದಣಿಗೆ ಯಾವುದೇ ಶುಲ್ಕ, ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿಪಡಿಸಿಲ್ಲ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿ ಪ್ರಕಟಿಸಿದೆ. ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರತಿ ಒಂದು ಸಾವಿರ ಜನಸಂಖ್ಯೆ ಅಥವಾ ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಓರ್ವ ಮಹಿಳಾ ಪ್ರಜಾಪ್ರತಿನಿಧಿ ಸೇರಿ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular