ಬೆಂಗಳೂರು : ‘ ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ, ಗೃಹ ಲಕ್ಷ್ಮಿ ಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ ಇಲ್ಲ, ಶುಲ್ಕವೂ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹ ಲಕ್ಷ್ಮಿ ಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ ಇಲ್ಲ, ಶುಲ್ಕವೂ ಇಲ್ಲ . ಒಂದು ವೇಳೆ ಅರ್ಜಿ ಸಲ್ಲಿಸಲು ಹಣ ತೆಗೆದುಕೊಂಡರೆ ಕರೆ ಅಥವಾ ಎಸ್ ಎಂಎಸ್ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು. ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾವುದೇ ಗೊಂದಲಗಳಿದ್ದರೂ 1902 ಸಂಖ್ಯೆಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ SMS ಸಂದೇಶ ಅಥವಾ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.
ಗೃಹ ಲಕ್ಷ್ಮೀ ಯೋಜನೆಗೆ ಜುಲೈ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ರಾಷ್ಟ್ರೀಯ ನಾಯಕರನ್ನು ಕರೆಸಿ ಯೋಜನೆಗೆ ಚಾಲನೆ ನೀಡುವ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.ಕರ್ನಾಟಕ ಒನ್, ಗ್ರಾಮ್ ಒನ್, ಬಾಪೂಜಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಗೃಹಲಕ್ಷ್ಮೀ ಯೋಜನೆಯಿಂದ 1.28 ಕೋಟಿ ಕುಟುಂಬಗಳಿಗೆ ಲಾಭವಾಗಲಿದೆ. ಜಿ ಎಸ್ ಟಿ ಮತ್ತು ಆದಾಯ ತೆರಿಗೆ ಪಾವತಿಸುವವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಏನಾದರೂ ಗೊಂದಲವಿದ್ದರೆ 8147500500 ಮೊಬೈಲ್ ಸಂಪರ್ಕಿಸಬಹುದು.ಅರ್ಜಿ ಫಾರ್ಮ್ ತುಂಬಲು ನೆರವಾಗಲು ಪ್ರಜಾ ಪ್ರತಿನಿಧಿಗಳನ್ನು ನೇಮಕ ಮಾಡಲಾಗುವುದು. ಅವರಿಗೆ ಯಾವುದೇ ರೀತಿಯ ಹಣ ನೀಡಬಾರದು. ಸರಕಾರವೇ ಅವರಿಗೆ ಹಣ ನೀಡಲಿದೆ ಎಂದರು.
ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ . ರೇಷನ್ ಕಾರ್ಡ್ ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್ಎಂಎಸ್ ಮೂಲಕ ರವಾನೆ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿಗೆ ಅವಕಾಶ ಮಾಡಲಾಗುವುದು ಎಂದರು. ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗಿರತಕ್ಕದ್ದಲ್ಲ ಎಂದರು.
ಗೃಹಲಕ್ಷ್ಮೀ’ಯೋಜನೆಗೆ ನೋಂದಣಿಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆಯ ಪಾಸ್ ಬುಕ್ ಬೇಕಾಗಿರುತ್ತದೆ. ಒಂದು ವೇಳೆ ಆಧಾರ್ ನಂಬರ್ ಜೋಡಣೆಯಾಗಿರುವ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಆ ಖಾತೆಯ ಪಾಸ್ ಬುಕ್ ಅಗತ್ಯ. ಗ್ರಾಮ ವನ್, ಬಾಪೂಜಿ ಕೇಂದ್ರ, ಕರ್ನಾಟಕ ವನ್, ಬೆಂಗಳೂರು ವನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ. ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ಮನೆಗೆ ತಲುಪಿಸಲಾಗುತ್ತದೆ.