ಬೆಂಗಳೂರು: ಪುಷ್ಪಾ ಸಿನಿಮಾ ಸ್ಟೈಲ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ನ್ನು ಬೆಂಗಳೂರು ಸಿಸಿಬಿ ಮಹಿಳಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಗಾಂಜಾ ಪೆಡ್ಲರ್ ಚಾಂದ್ ಸಹೋದರ ಸಲ್ಮಾನ್ ಪಾಷಾ, ಚಂದ್ರಭಾನು ಬಿಷ್ಣೋಯ್, ಲಕ್ಷ್ಮೀ ಮೋಹನ್ ದಾಸ್ ಎಂದು ಗುರುತಿಸಲಾಗಿದೆ. ಬಂಧಿತರು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದರು.
ಬಂಧಿತರಿಂದ ಬರೋಬ್ಬರಿ 12 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.