HomeKarnatakaBIG NEWS : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 'BMTC' ಬಸ್ ಪಾಸ್ ಅವಧಿ ಜುಲೈ...

BIG NEWS : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘BMTC’ ಬಸ್ ಪಾಸ್ ಅವಧಿ ಜುಲೈ 31 ರವರೆಗೆ ವಿಸ್ತರಣೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದ್ದು, ಬಸ್ ಪಾಸ್ ಅವಧಿ ಜುಲೈ 31 ರವರೆಗೆ ವಿಸ್ತರಣೆ ಮಾಡಿದೆ.

ಜುಲೈ 31 ರ ವರೆಗೆ ವಿದ್ಯಾರ್ಥಿಗಳು ಹೊಸ ಪಾಸ್ಗಳನ್ನು ಪಡೆಯಬಹುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಮಾಹಿತಿ ನೀಡಿದೆ. ಕಳೆದ ವರ್ಷ ನೀಡಲಾದ ವಿದ್ಯಾರ್ಥಿಗಳ ಬಸ್ ಪಾಸ್ಗಳ ಮಾನ್ಯತೆಯನ್ನು ಜುಲೈ 31 ರ ವರೆಗೆ ವಿಸ್ತರಿಸಿ ಬಿಎಂಟಿಸಿ ಆದೇಶ ಹೊರಡಿಸಿದೆ. ಹೊಸ ಬಿಎಂಟಿಸಿ ಬಸ್ ಪಾಸ್ಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಯವನ್ನು ನೀಡಲಾಗಿದ್ದು, ಬಸ್ ಪಾಸ್ ಅವಧಿ ಜುಲೈ 31 ರವರೆಗೆ ವಿಸ್ತರಣೆ ಮಾಡಿದೆ.

ಕಳೆದ ವರ್ಷದ ಬಸ್ ಪಾಸ್ ಅವಧಿ ಜುಲೈ 31ರವರೆಗೆ ಇರಲಿದೆ. ಇದರಿಂದ 2023-24ನೇ ಸಾಲಿನ ಹೊಸ ಬಸ್ ಪಾಸ್ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.ಇದೇ ವೇಳೆ ಹೊಸ ಬಸ್ ಪಾಸ್ ಅವಧಿಗೆ ಅರ್ಜಿ ಸಲ್ಲಿಕೆ ಕೂಡ ಆರಂಭವಾಗಿದ್ದು, ಜುಲೈ 7ರಿಂದ ಹೊಸ ಬಸ್ ಪಾಸ್ ಕೂಡ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಪ್ರಸಕ್ತ ವರ್ಷದ ಶಾಲಾ-ಕಾಲೇಜುಗಳ ಶುಲ್ಕ ಪಾವತಿ ರಶೀದಿ ಅಥವಾ ಶಾಲಾ-ಕಾಲೇಜು ಗುರುತಿನ ಚೀಟಿ ಪ್ರಸ್ತುತಪಡಿಸಿ ಪಡೆಯಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ವಿದ್ಯಾರ್ಥಿಗಳು ಜುಲೈ 31ರೊಳಗೆ ಹೊಸ ಬಸ್ ಗಳಿಗಾಗಿ ಆನ್ ಲೈನ್ ಅಥವಾ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವಂತೆ ಬಿಎಂಟಿಸಿ ಸೂಚಿಸಿದೆ. ಆನ್ ಲೈನ್ ಅಪ್ಲಿಕೇಶನ್ ಗಳಿಗಾಗಿ ವಿದ್ಯಾರ್ಥಿಗಳು ಸೇವಾಸಿಂಧು ಆಫ್ ಅಥವಾ ಬಿಎಂಟಿಸಿ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ತುಂಬಬಹುದು.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular