ಬೆಂಗಳೂರು : ಡಿಸೆಂಬರ್ ನಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಂಸದ ಎಸ್.ಮುನಿಸ್ವಾಮಿ ಈ ಸರ್ಕಾರಕ್ಕೆ ಆಯಸ್ಸಿಲ್ಲ, ಡಿಸೆಂಬರ್ ಅಥವಾ ಜನವರಿಯಲ್ಲಿ ಬಿದ್ದು ಹೋಗುತ್ತದೆ. ಕಾಂಗ್ರೆಸ್ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಸಂಸದ ಎಸ್ ಮುನಿಸ್ವಾಮಿ ಹೇಳಿದರು.
ಅನ್ನಭಾಗ್ಯ ಯೋಜನೆ ಅಡಿ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದರು. ಆದರೆ ಈಗ ಮತ್ತೆ ಐದು ಕೆಜಿ ಅನ್ನೋದು ಸರಿಯಲ್ಲ, ಗ್ಯಾರಂಟಿ ಹೇಳುವಾಗ ಷರತ್ತು ಇರಲಿಲ್ಲ, ಈಗ ಕಂಡಿಷನ್ ಅಂತಿದ್ದಾರೆ ಎಂದರು.
‘ಬಿಡಿಸಿಸಿ’ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ‘ಆನಂದ್ ಸಿಂಗ್’ ರಾಜೀನಾಮೆ
ಬಳ್ಳಾರಿ/ವಿಜಯನಗರ : ಬಿಡಿಸಿಸಿ ಬ್ಯಾಂಕ್ ( ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ.
ಬಳ್ಳಾರಿ, ವಿಜಯನಗರ ಅವಳಿ ಜಿಲ್ಲೆಯ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಜುಲೈ 1 ರಿಂದಲೇ ಅನ್ವಯವಾಗುವಂತೆ ರಾಜೀನಾಮೆ ನೀಡಿದ್ದಾರೆ. 100 ವರ್ಷದ ಇತಿಹಾಸ ಹೊಂದಿರುವ ಬಿಡಿಸಿಸಿ ಬ್ಯಾಂಕ್ ಉತ್ತಮ ಹೆಸರು ಮಾಡಿದೆ. ಆನಂದ್ ಸಿಂಗ್ ಹೊರತುಪಡಿಸಿ ಯಾರೊಬ್ಬರು ನಾಮಪತ್ರ ಸಲ್ಲಿಸಿದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು . ವೈಯಕ್ತಿಕ ಕಾರಣಕ್ಕೆ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.