ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 19 ರ ಸಂಜೆ 5.30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ.
ಜುಲೈ 19 ರಂದು ಸಂಜೆ 5 :30 ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಿಎಂ ಸಿದ್ದರಾಮಯ್ಯ ಗೃಹಲಕ್ಷ್ಮಿ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ.
ಈ ಬಗ್ಗೆ ಬೆಳಗ್ಗೆ ಮಾಹಿತಿ ನೀಡಿದ್ದಂತಹ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ‘ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ . ಅರ್ಜಿ ಸ್ವೀಕಾರ ಜುಲೈ 19 ರಿಂದ ಆರಂಭವಾಗಲಿದ್ದು, ಆಗಸ್ಟ್ 15ಕ್ಕೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ಗಳಲ್ಲಿ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗಲಿದೆ’ ಎಂದರು.
ರೇಷನ್ ಕಾರ್ಡ್ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್ಎಂಎಸ್ ಮೂಲಕ ರವಾನೆ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿಗೆ ಅವಕಾಶ ಮಾಡಲಾಗುವುದು ಎಂದರು. ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗಿರತಕ್ಕದ್ದಲ್ಲ ಎಂದರು.
ಗೃಹಲಕ್ಷ್ಮಿ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿ ಪ್ರಕಟಿಸಿದೆ.ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರತಿ ಒಂದು ಸಾವಿರ ಜನಸಂಖ್ಯೆ ಅಥವಾ ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಓರ್ವ ಮಹಿಳಾ ಪ್ರಜಾಪ್ರತಿನಿಧಿ ಸೇರಿ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ.ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ ಖಾತೆಗೆ ಮಾಸಿಕ 2 ಸಾವಿರ ರೂ. ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.