BIGG NEWS : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಮೂತ್ರ ವಿಸರ್ಜನೆ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಸ್ಥಳೀಯ ಬಿಜೆಪಿ ಕಾರ್ಯಕರ್ತನನ್ನು ಅಪಹರಿಸಿ, ಹಲ್ಲೆ ನಡೆಸಿ, ಮುಖದ ಮೇಲೆ ಮೂತ್ರ ವಿಸರ್ಜಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಪಶ್ಚಿಮ ಮಿಡ್ನಾಪುರದ ಗಾರ್ಬೆಟಾದಲ್ಲಿ ಬಿಜೆಪಿ ಮತಗಟ್ಟೆ ಏಜೆಂಟ್ ಒಬ್ಬರನ್ನು ತೃಣಮೂಲ ದುಷ್ಕರ್ಮಿಗಳು ಕ್ರೂರವಾಗಿ ಥಳಿಸಿ ಮೂತ್ರ ಕುಡಿಯುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ಇತ್ತೀಚೆಗೆ ಬುಡಕಟ್ಟು ಯುವಕನೊಬ್ಬನಿಗೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಆಕ್ರೋಶಕ್ಕೆ ಕಾರಣವಾಗಿದೆ. ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಬಿಜೆಪಿ ಸ್ಥಳೀಯ ಮುಖಂಡ ಸಮೀರ್ ಕುಮಾರ್ ದಾಸ್ ಮಾಹಿತಿ ನೀಡಿದ್ದು,”ಪಂಚಾಯತ್ ಚುನಾವಣೆಯಲ್ಲಿ ತಮ್ಮ ವಿಜಯವನ್ನು ಆಚರಿಸಲು ತೃಣಮೂಲ ಕಾಂಗ್ರೆಸ್ ದುಷ್ಕರ್ಮಿಗಳು ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣಕ್ಕೆ ಬೇಡಿಕೆ ಇಟ್ಟರು. ಬಡ ಹಿನ್ನೆಲೆಯಿಂದ ಬಂದ ಬಿಜೆಪಿ ಮತದಾನ ಏಜೆಂಟ್ ಹಣ ಪಾವತಿಸಲು ನಿರಾಕರಿಸಿದರು. ಅವರನ್ನು ಸ್ಥಳೀಯ ಪಕ್ಷದ ಕಚೇರಿಗೆ ಕರೆದೊಯ್ದು ಥಳಿಸಿ, ಮೂತ್ರ ವಿಸರ್ಜನೆಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಆದರೆ ತೃಣಮೂಲ ಈ ಆರೋಪವನ್ನು ನಿರಾಕರಿಸಿದೆ, ಪೊಲೀಸ್ ದೂರು ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read