ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಂಡರ ಅಟ್ಟಹಾಸ ಹೆಚ್ಚುತ್ತಿದ್ದು, ಡ್ಯೂಟಿ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಟೆಕ್ಕಿಯೋರ್ವರಿಗೆ ದುಷ್ಕರ್ಮಿಗಳು ಕಿರುಕುಳ ನೀಡಿದ ಘಟನೆ ನಡೆದಿದೆ.
ಬೆಂಗಳೂರಿನ ಉತ್ತರ ತಾಲೂಕಿನ ಬೃಂದಾವನ ನಗರದಲ್ಲಿ ಈ ಘಟನೆ ನಡೆದಿದ್ದು, ಡ್ಯೂಟಿ ಮುಗಿಸಿ ಮನೆಗೆ ಬರುತ್ತಿದ್ದ ಟೆಕ್ಕಿಯನ್ನು ಬೈಕ್ ನಲ್ಲಿ ಹಿಂಬಾಲಿಸುತ್ತ ಬಂದ ದುಷ್ಕರ್ಮಿಗಳು ಟೈಂ ಪಾಸ್ ಗಾಗಿ ಫೋನ್ ನಂಬರ್ ಕೊಡು ಎಂದು ಕಿರುಕುಳ ನೀಡಿದ್ದಾರೆ. ಫೋನ್ ನಂಬರ್ ಕೊಡದಿದ್ದಕ್ಕೆ ಪುಂಡರು ಟೆಕ್ಕಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಅಲ್ಲದೇ ಮನೆವರೆಗೂ ಫಾಲೋ ಮಾಡಿಕೊಂಡು ಬಂದಿದ್ದಾರೆ. ಮನೆ ಬಳಿ ನಿಲ್ಲಿಸಿದ್ದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ.