alex Certify BIG NEWS: ಮಳೆ ಕೈಕೊಟ್ಟ ಹಿನ್ನೆಲೆ; ನೊಂದ ರೈತ ಮಹಿಳೆ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಳೆ ಕೈಕೊಟ್ಟ ಹಿನ್ನೆಲೆ; ನೊಂದ ರೈತ ಮಹಿಳೆ ಆತ್ಮಹತ್ಯೆಗೆ ಶರಣು

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯಾಗುತ್ತಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದಾಗಿ ಬರದ ಛಾಯೆ ಆವರಿಸಿದೆ. ಈ ಬಾರಿ ಮಳೆ ಕೈಕೊಟ್ಟ ಪರಿಣಾಮ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಒಂದೆಡೆ ಮಳೆ ಕೊರತೆ ಇನ್ನೊಂದೆಡೆ ಸಾಲ ಬಾಧೆ… ಇದರಿಂದ ನೊಂದ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಲಗಮವ್ವಾ ಬಾಗಿ ಮೃತ ರೈತ ಮಹಿಳೆ.

ಸಾಲ ಬಾಧೆಯಿಂದ ಅದಾಗಲೇ ಬೆಸತ್ತಿದ್ದ ರೈತ ಮಹಿಳೆ ಈ ಬಾರಿ ಮಳೆ ಇಲ್ಲದೇ ಬಿತ್ತಿದ ಬೆಳೆಯೂ ಕೈಗೆ ಸಿಗುವ ಲಕ್ಷಣಗಳು ಕಾಣುತ್ತಿಲ್ಲ ಎಂದು ನೊಂದಿದ್ದರು. ಇದರಿಂದ ದಿಕ್ಕು ತೋಚದೇ ಮಹಿಳೆ ನಾಲ್ವರು ಮಕ್ಕಳನ್ನು ಅನಥಾವಾಗಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಹುಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...