HomeKarnatakaBIG NEWS: ಗೃಹಲಕ್ಷ್ಮಿ ಯೋಜನೆ ಜಾರಿಗೆ ತರುವ ಉದ್ದೇಶವೇ ಸರ್ಕಾರಕ್ಕಿಲ್ಲ; ದಿನಾಂಕದ ಮೇಲೆ ದಿನಾಂಕ ಮುಂದೂಡಿಕೆ;...

BIG NEWS: ಗೃಹಲಕ್ಷ್ಮಿ ಯೋಜನೆ ಜಾರಿಗೆ ತರುವ ಉದ್ದೇಶವೇ ಸರ್ಕಾರಕ್ಕಿಲ್ಲ; ದಿನಾಂಕದ ಮೇಲೆ ದಿನಾಂಕ ಮುಂದೂಡಿಕೆ; ಮಾಜಿ ಸಿಎಂ ವಾಗ್ದಾಳಿ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮೀ ಯೋಜನೆಗೆ ಯಾವುದೇ ನಿರ್ಧಿಷ್ಟ ನಿಯಮ ಮಾಡುತ್ತಿಲ್ಲ, ಯೋಜನೆ ಜಾರಿಗೆ ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಗೃಹಲಕ್ಷ್ಮೀ ಯೋಜನೆ ಜಾರಿಗೆ ದಿನಾಂಕದ ಮೇಲೆ ದಿನಾಂಕವನ್ನು ಮುಂದೂಡಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಈ ಯೋಜನೆ ಜಾರಿಗೆ ತರುವ ಉದ್ದೇಶವೇ ಇಲ್ಲ ಎಂಬುದು ಸ್ಪಷ್ಟ. ರಾಜ್ಯದ ಹೆಣ್ಣು ಮಕ್ಕಳಿಗೆ ಭ್ರಮನಿರಸನ ಮಾಡುವ ಉದ್ದೇಶ ಇವರದ್ದು ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಯೋಜನೆ, ಎಲ್ಲಾ ವಿಷಯಗಳ ಬಗ್ಗೆ ಸದನದಲ್ಲಿ ಗಂಭೀರವಾಗಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular