HomeKarnatakaBIGG NEWS : ಲೋಕಸಭೆ ಚುನಾವಣೆಗೆ `BJP-JDS’ ಮೈತ್ರಿ ಫಿಕ್ಸ್? ತೀವ್ರ ಕುತೂಹಲ ಮೂಡಿಸಿದೆ ಮಾಜಿ...

BIGG NEWS : ಲೋಕಸಭೆ ಚುನಾವಣೆಗೆ `BJP-JDS’ ಮೈತ್ರಿ ಫಿಕ್ಸ್? ತೀವ್ರ ಕುತೂಹಲ ಮೂಡಿಸಿದೆ ಮಾಜಿ ಸಿಎಂ HDK ನಡೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರುವ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದಾಗಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ ಅಥವಾ ನಾಡಿದ್ದು ದೆಹಲಿಗೆ ಭೇಟಿ ನೀಡಿ ಬಿಜೆಪಿ ವರಿಷ್ಠರ ಜೊತೆಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಭಾಗವಾಗಿ ಸೇರಲು ಜೆಡಿಎಸ್ ಮಹತ್ವದ ಹೆಜ್ಜೆ ಇಟ್ಟಿದ್ದು, ನಾಳೆ ದೆಹಲಿಗೆ ಪ್ರವಾಸ ಕೈಗೊಳ್ಳಲಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯ ಬಿಜೆಪಿ ವರಿಷ್ಠರ ಜೊತೆಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಜೊತೆಗೆ ಮೈತ್ರಿಯಾದ್ರೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ನಾಲ್ಕು ಸ್ಥಾನಗಳಲ್ಲಿ ಗೆಲ್ಲಬಹುದು ಎಂಬ ವಿಶ್ವಾಸದ ಜೊತೆಗೆ ಕಾಂಗ್ರೆಸ್ ಅನ್ನು ಲೋಕಸಭೆ ಚುನಾವಣೆಯಲ್ಲಿ ಕಟ್ಟಿಹಾಕಬಹುದು ಎಂಬ ಲೆಕ್ಕಚಾರದಲ್ಲಿ ಜೆಡಿಎಸ್ ಇದ್ದು, ಇದರ ಭಾಗವಾಗಿ ಕಳೆದ ತಿಂಗಳು ದೆಹಲಿಗೆ ಭೇಟಿ ನೀಡಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಒಂದು ಸುತ್ತಿನ ಮಾತುಕತೆ ನಡೆಸಿದ್ದರು. ನಾಳೆ ಅಥವಾ ನಾಡಿದ್ದು ಭೇಟಿ ನೀಡಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಮಾತುಕತೆ ನಡೆದಿದೆ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಕುರಿತಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಹೇಳಿಕೆ ನೀಡಿದ್ದು, ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜೊತೆಗೆ ಮಾತುಕತೆ ನಡೆದಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ನಮ್ಮ ವರಿಷ್ಠರು ಮತ್ತು ದೇವೇಗೌಡರ ಜೊತೆಗೆ ಮಾತುಕತೆ ನಡೆದಿದೆ.ಈಗಾಗಲೇ ಹೆಚ್.ಡಿ.ದೇವೇಗೌಡರು ಕೆಲವೊಂದು ಭಾವನೆ ವ್ಯಕ್ತಪಡಿಸಿದ್ದಾರೆ. ಮಾತುಕತೆ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ಆಗುತ್ತದೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular