
ಇನ್ನು ಈ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೃತ್ಯ ನಡೆದ ಸ್ಥಳವು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ತವರು ಕ್ಷೇತ್ರವಾಗಿದೆ. ಮಿಶ್ರಾ ಢಾಟಿಯಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಸಂತ್ರಸ್ತರಲ್ಲಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂತ್ರಸ್ತೆಯರು ಹಾಗೂ ಆರೋಪಿಗಳು ವಿದ್ಯಾರ್ಥಿಗಳಾಗಿದ್ದು ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ ಎಂದು ದಾತಿಯಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳು ಹಾಗೂ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

