HomeKarnatakaBIG NEWS: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥ

BIG NEWS: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥ

ತುಮಕೂರು: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥರಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಬಸ್ಸರಹಳ್ಳಿಯಲ್ಲಿ ಈ ಅವಘಡ ಸಂಭವಿಸಿದ್ದು, ಅಸ್ವಸ್ಥಗೊಂಡಿರುವ 15 ಜನರನ್ನು ಪಾವಗಡ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರಾಮದ ಸಾರ್ವಜನಿಕ ನಲ್ಲಿಗೆ ಪೂರೈಕೆಯಾಗುವ ನೀರು ಸರಬರಾಜು ಸಂಪರ್ಕದ ಗೇಟ್ ವಾಲ್ ನಲ್ಲಿ ನೀರು ಸೋರಿಕೆಯಾಗಿ ನೀರು ಕಲುಷಿತಗೊಂಡಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮಸ್ಥರು ಸ್ಥಳೀಯ ಅಧಿಕಾರಿಗಳ ಬೇಜವಾಬ್ದಾರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈ.ಎನ್.ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular