HomeKarnatakaರಾಜಕೀಯದಲ್ಲಿ ಮಹತ್ತರ ಬದಲಾವಣೆ ಸುಳಿವು ನೀಡಿದ ಆಯನೂರು: ವಿಪಕ್ಷ ನಾಯಕರಾಗಿ ಹೆಚ್.ಡಿ. ಕುಮಾರಸ್ವಾಮಿ…?

ರಾಜಕೀಯದಲ್ಲಿ ಮಹತ್ತರ ಬದಲಾವಣೆ ಸುಳಿವು ನೀಡಿದ ಆಯನೂರು: ವಿಪಕ್ಷ ನಾಯಕರಾಗಿ ಹೆಚ್.ಡಿ. ಕುಮಾರಸ್ವಾಮಿ…?

ಶಿವಮೊಗ್ಗ: ಜುಲೈ 28ರ ನಂತರ ರಾಜಕೀಯ ವಾತಾವರಣ ಬದಲಾಗಲಿದೆ. ಜೆಡಿಎಸ್ ಪಕ್ಷಕ್ಕೆ ಕಡಿಮೆ ಸ್ಥಾನ ಬಂದಿದ್ದರೂ, ಹೆಚ್.ಡಿ. ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕರಾಗಿ ವಿಜೃಂಭಿಸುತ್ತಿದ್ದು, ಅಧಿಕೃತ ವಿಪಕ್ಷ ನಾಯಕರಾಗುವ ಸಾಧ್ಯತೆ ಇದೆ ಎಂದು ಮಾಜಿ ಶಾಸಕ ಆಯನೂರು ಮಂಜುನಾಥ್ ಹೇಳಿದ್ದಾರೆ.

ಜು. 28ರಂದೇ ಕುಮಾರಸ್ವಾಮಿ ವಿಪಕ್ಷ ನಾಯಕರಾಗಿ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ. ಯಾರನ್ನು ಬಿಟ್ಟು ಬಂದೆನೋ ಅವರನ್ನು ಒಪ್ಪಿಕೊಳ್ಳುವ ಅನಿವಾರ್ಯತೆ ಬಂದಿದೆ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿದಿವೆ. ಕಾಂಗ್ರೆಸ್ ನಾಯಕರು ಕೂಡ ಈ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಬಹಳ ಕಡಿಮೆ ಸ್ಥಾನ ದೊರೆತಿದೆ. ವಿರೋಧ ಪಕ್ಷದ ನಾಯಕರಾಗಿ ಕುಮಾರಸ್ವಾಮಿ ವಿಜೃಂಭಿಸುತ್ತಿದ್ದಾರೆ. ಜುಲೈ 28ರ ನಂತರ ಅಧಿಕೃತ ವಿಪಕ್ಷ ನಾಯಕರಾಗಿ ಆಯ್ಕೆಯಾಗುವ ನಿರೀಕ್ಷೆ ಇದೆ. ಯಾರನ್ನು ಬಿಟ್ಟು ಬಂದೆನೋ ಅವರನ್ನೇ ಅಪ್ಪಿಕೊಳ್ಳುವ ಸಂದರ್ಭ ಬಂದಿದೆ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೇರಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular