HomeKarnatakaBIG NEWS: ರಾಜ್ಯಾಧ್ಯಕ್ಷ ಸ್ಥಾನ ನೀಡದಿದ್ದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ನಡೆ ನಿರ್ಧಾರ; ಬಿಜೆಪಿ...

BIG NEWS: ರಾಜ್ಯಾಧ್ಯಕ್ಷ ಸ್ಥಾನ ನೀಡದಿದ್ದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ನಡೆ ನಿರ್ಧಾರ; ಬಿಜೆಪಿ ನಾಯಕರಿಗೆ ಸಂದೇಶ ರವಾನಿಸಿದ ಮಾಜಿ ಸಚಿವ ವಿ. ಸೋಮಣ್ಣ


ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಮುಂದುವರೆದಿದೆ. ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ವಿ.ಸೋಮಣ್ಣ ಪಕ್ಷಕ್ಕೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.

ತನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡದಿದ್ದರೆ ಕಾರ್ಯಕರ್ತರ ಜೊತೆ ಚರ್ಚಿಸಿ ಮುಂದಿನ ನಡೆ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ. ಗೋವಿಂದರಾಜನಗರ ಕ್ಷೇತ್ರದ ವಾರ್ಡ್ ಮಟ್ಟದ ಸಭೆಯಲ್ಲಿ ವಿ.ಸೋಮಣ್ಣ ಈ ಹೇಳಿಕೆ ನೀಡಿದ್ದಾರೆ.

ಸಭೆಯಲ್ಲಿ ಮಾತನಾಡಿದ ವಿ.ಸೋಮಣ್ಣ, ಕಳೆದ 40 ವರ್ಷಗಳಿಂದ ರಾಜ್ಯ ರಾಜಕಾರಣದ ಆಗುಹೋಗುಗಳನ್ನು ತಿಳಿದಿದ್ದೇನೆ. ಪಕ್ಷಕ್ಕಾಗಿ ಸಾಕಷ್ಟು ಶ್ರಮಿಸಿದ್ದೇನೆ. 365 ದಿನವೂ ಜನರ ನಡುವೆ ಇದ್ದು, ಜನ ಸಂಘಟನೆ ಮಾಡಿದ್ದೇನೆ. ಹಾಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಕೇಳಿದ್ದೇನೆ. ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ದುಡಿಯುತ್ತೇನೆ. ಇಲ್ಲವಾದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ನಡೆ ಬಗ್ಗೆ ತೀರ್ಮಾನ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular