HomeKarnatakaಮೆಕ್ಕೆಜೋಳದ ಹೊಲದಲ್ಲಿ ಕಚ್ಚಿದ ಹಾವು: ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಸಾವು

ಮೆಕ್ಕೆಜೋಳದ ಹೊಲದಲ್ಲಿ ಕಚ್ಚಿದ ಹಾವು: ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಸಾವು

ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹೊಳಲು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಸಾವನ್ನಪ್ಪಿದ್ದಾರೆ.

ಹಾವು ಕಚ್ಚಿ ಅಸ್ವಸ್ಥಗೊಂಡಿದ್ದ ವೀಣಾ ಲಿಂಗನಗೌಡ(26) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿನಲ್ಲಿ ಮೆಕ್ಕೆಜೋಳದ ತೆನೆ ಮುರಿಯುವಾಗ ಹಾವು ಕಚ್ಚಿದೆ. ಹಾವು ಕಚ್ಚಿದ ಕೂಡಲೇ ಅವರನ್ನು ಹೊಳಲು ಆರೋಗ್ಯ ಕೇಂದ್ರಕ್ಕೆ ಕರೆ ತರಲಾಗಿದ್ದು, ವೈದ್ಯರಿಲ್ಲದ ಕಾರಣ ಹಾವೇರಿ ತಾಲೂಕಿನ ಗುತ್ತಲ ಆರೋಗ್ಯ ಕೇಂದ್ರಕ್ಕೆ ವಾಹನದಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular